ಗುಜರಾತ್, ಫೆ.09 (DaijiworldNews/AA): ರಸ್ತೆಬದಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮರಳು ತುಂಬಿದ ಟ್ರಕ್ ಪಲ್ಟಿಯಾಗಿ ಮೂವರು ಮಹಿಳೆಯರು ಸೇರಿ ಒಂದು ಮಗು ದುರ್ಮರಣ ಹೊಂದಿದ್ದಾರೆ.

ಅಪಘಾತದ ಬಳಿಕ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಜೆಸಿಬಿ ಬಳಸಿ ಮೃತದೇಹಗಳನ್ನು ಹೊರತೆಗೆಯಲಾಯಿತು.
ಮೃತಪಟ್ಟವರೆಲ್ಲರೂ ದಾಹೋದ್ ಜಿಲ್ಲೆಯವರು ಮತ್ತು ಕೆಲಸಕ್ಕಾಗಿ ಆ ಪ್ರದೇಶಕ್ಕೆ ಬಂದಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.