ಪ್ರಯಾಗ್ ರಾಜ್, ಫೆ.09(DaijiworldNews/TA): 144 ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಮಹಾಕುಂಭ ಮೇಳದಲ್ಲಿ ಭಾಗಿಯಾಗಿರುವ ಕನ್ನಡದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ, ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಡಿಕೆಶಿ ದಂಪತಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಪೂಜಾ ಕಾರ್ಯವನ್ನು ನೆರವೇರಿಸಿ, ಪವಿತ್ರ ನದಿಯಲ್ಲಿ ಸ್ನಾನ ಮಾಡಿದರು. ಪುಣ್ಯಸ್ನಾನದ ಬಳಿಕ, ಡಿಕೆಶಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದು, ಮಹಾಕುಂಭದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದ್ದು ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದ ಹಿನ್ನೆಲೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕೆಗಳ ಜೊತೆಗೆ ಇದರ ವಿರುದ್ಧ ಬೆಂಬಲ ವ್ಯಕ್ತಪಡಿಸಿದ್ದರು, ಇದು ವಿವಾದಕ್ಕೆ ಕಾರಣವಾಗಿದೆ. ಇದೀಗ ಡಿ.ಕೆ. ಶಿವಕುಮಾರ್ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುವ ಮೂಲಕ ಮತ್ತೊಮ್ಮೆ ದೇಶಾದ್ಯಾಂತ ಗಮನ ಸೆಳೆದಿದ್ದಾರೆ.