ರಾಯಚೂರು, ಫೆ.10 (DaijiworldNews/AA): ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷದಿಂದ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ರಾಯಚೂರು ತಾಲೂಕಿನ ಮರ್ಚೇಡ್ ಗ್ರಾಮದ ಪಾರ್ವತಮ್ಮ ಹಾಗೂ ಚಂದ್ರಶೇಖರ್ ದಂಪತಿಯ ಮಗು ಮೃತಪಟ್ಟಿದೆ.
ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾರ್ವತಮ್ಮನನ್ನು ವೈದ್ಯರು ತಪಾಸಣೆ ಮಾಡಿ ನಾರ್ಮಲ್ ಡೆಲಿವರಿ ಆಗುತ್ತದೆ ಎಂದು ತಿಳಿಸಿ 2 ದಿನ ಕಾಯಿಸಿದ್ದರು. ಬಳಿಕ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರೂ, ಆಗಲೂ ಕೂಡ ಹೆರಿಗೆ ಮಾಡಲು ವಿಳಂಬ ಮಾಡಿದ್ದರು.
ಇದರಿಂದ ಗರ್ಭಿಣಿಯ ಕುಟುಂಬಸ್ಥರು ಸಿಸೇರಿಯನ್ ಮಾಡುವಂತೆ ವೈದ್ಯರಿಗೆ ತಿಳಿಸಿದ್ದಾರೆ. ಆದರೂ ಕೂಡ ವಿಳಂಬ ಮಾಡಿ ನಾರ್ಮಲ್ ಡೆಲಿವರಿ ಮಾಡಿದ್ದು, ಈ ವೇಳೆ ಮಗು ಸಾವನ್ನಪ್ಪಿದೆ. ಇದರಿಂದ ಹೆರಿಗೆ ಮಾಡಲು ತಡ ಮಾಡಿದ್ದಕ್ಕೆ ಮಗು ಸಾವನ್ನಪ್ಪಿದೆ ಎಂದು ಬಾಣಂತಿಯ ಪತಿ ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.