ನವದೆಹಲಿ, ಫೆ.25 (DaijiworldNews/AA): ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ (ಆರ್ ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಮಕ್ಕಳಾದ ತೇಜ್ ಪ್ರತಾಪ್ ಮತ್ತು ಪುತ್ರಿ ಹೇಮಾ ಯಾದವ್ ಅವರಿಗೆ ದೆಹಲಿ ನ್ಯಾಯಾಲಯವು ಇಂದು ಸಮನ್ಸ್ ಜಾರಿ ಮಾಡಿದೆ.

ಲಾಲು ಪ್ರಸಾದ್ ಯಾದವ್ ಹಾಗೂ ಅವರ ಇಬ್ಬರು ಮಕ್ಕಳಿಗೆ ಮಾರ್ಚ್ 11ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಕೋರ್ಟ್ ಆದೇಶಿಸಿದೆ. ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್ ಅವರಿಗೆ ಕೂಡ ಹೊಸ ಸಮನ್ಸ್ ಜಾರಿ ಮಾಡಿದ್ದಾರೆ.
ಈ ಹಿಂದೆ ಸಿಬಿಐ ಎತ್ತಿದ್ದ ಕೆಲ ಅಂಶಗಳ ಕುರಿತು ಸ್ಪಷ್ಟೀಕರಣಗಳನ್ನು ಕೇಳಿದ ನಂತರ ಕೋರ್ಟ್ ಕಳೆದ ವಾರದ ಆರಂಭದಲ್ಲಿ ಫೆ. 25ರಂದು ಪ್ರಕರಣ ಮುಂದೂಡಿತ್ತು. ಇದೀಗ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಅಂತಿಮ ಆರೋಪಪಟ್ಟಿಯನ್ನು ಪರಿಗಣಿಸಿದ ಬಳಿಕ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಅವರ ಮಗ ತೇಜ್ ಪ್ರತಾಪ್ ಯಾದವ್ ಮತ್ತು ಮಗಳು ಹೇಮಾ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಲಾಲು ಅವರ ಕಿರಿಯ ಮಗ ಮತ್ತು ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್ ಅವರಿಗೆ ರೋಸ್ ಅವೆನ್ಯೂ ನ್ಯಾಯಾಲಯವು ಹೊಸ ಸಮನ್ಸ್ ಜಾರಿಗೊಳಿಸಿದ್ದು, ಮಾರ್ಚ್ 11 ರಂದು ಹಾಜರಾಗುವಂತೆ ಸೂಚಿಸಿದೆ.