ನವದೆಹಲಿ,, ಫೆ.26 (DaijiworldNews/AA): ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಯೋಧರು ಅಂತರರಾಷ್ಟ್ರೀಯ ಗಡಿಯ ಸಮೀಪ ಇಂದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಠಾಣ್ಕೋಟ್ ಗಡಿ ಪ್ರದೇಶದ ಬಿಒಪಿ ತಾಶ್ಪತನ್ನಲ್ಲಿ ಪಾಕ್ ನುಸುಳುಕೋರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಭಾಗದಲ್ಲಿ ನಿಯೋಜನೆಗೊಂಡಿದ್ದ ಬಿಎಸ್ಎಫ್ ಸಿಬ್ಬಂದಿ ನುಸುಳುಕೋರನ ಚಲನವಲನಗಳನ್ನು ಗಮನಿಸಿ ಅನುಮಾನಗೊಂಡಿದ್ದಾರೆ.
ತಕ್ಷಣವೇ ಕಾರ್ಯಪ್ರವೃತ್ತರಾದ ಬಿಎಸ್ಎಫ್ ಪಡೆ ನುಸುಳುಕೋರನಿಗೆ ಹಲವು ಬಾರಿ ಎಚ್ಚರಿಕೆ ನೀಡಿದೆ. ಹಲವು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ಪಾಕ್ ನುಸುಳುಕೋರ ಗಡಿ ದಾಟಲು ಪ್ರಯತ್ನಿಸಿದ್ದಾನೆ. ಈ ವೇಳೆ ಬಿಎಸ್ಎಫ್ ಸಿಬ್ಬಂದಿ ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಗಡಿ ಭದ್ರತಾ ಪಡೆಯ ವಕ್ತಾರರು ತಿಳಿಸಿದ್ದಾರೆ.
ಪಾಕ್ ನುಸುಳುಕೋರನ ಒಳನುಸುಳುವಿಕೆಗೆ ಕಾರಣ ಮತ್ತು ಅವನ ಗುರುತು ಪತ್ತೆ ಮಾಡುವ ಬಗ್ಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.