ಬೆಂಗಳೂರು, ಮಾ.27 (DaijiworldNews/AA): ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ವಜಾ ಆಗಿದೆ.

ಪ್ರಕರಣದ ಗಂಭೀರತೆ ಪರಿಗಣಿಸಿ ಹಾಗೂ ನಟಿಯ ಪ್ರಭಾವ ಗಮಿನಿಸಿದಂತಿರುವ 64 ನೇ ಸಿಸಿಹೆಚ್ ನ್ಯಾಯಾಲಯವು ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಹೀಗಾಗಿ ಆರೋಪಿ ರನ್ಯಾ ರಾವ್ ಇನ್ನೂ ಕೆಲ ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಬೇಕಾಗಿದೆ.
ರನ್ಯಾ ರಾವ್ ಕೇಸ್ ನಲ್ಲಿ ಅಂತರರಾಷ್ಟ್ರೀಯ ಲಿಂಕ್ ಗಳು ಇವೆ. ಕಸ್ಟಮ್ಸ್ ಬ್ಯಾಬೇಜ್ ನಿಯಮ ಉಲ್ಲಂಘನೆ ಮಾಡಲಾಗಿದೆ, ಹೊರ ಬಂದಲ್ಲಿ ಸಾಕ್ಷಿ ನಾಶ ಮತ್ತು ತನಿಖೆಯ ಹಾದಿ ತಪ್ಪಿಸಬಹುದು. ಆಕೆ ಒಂದು ವರ್ಷದ ಅವಧಿಯಲ್ಲಿ ಇಪತ್ತೇಳು ಬಾರಿ ವಿದೇಶಿ ಪ್ರಯಾಣ ಮಾಡಿದ್ದಾರೆ. ಈಕೆಯಿಂದ ಮೂವತ್ತೆಂಟು ಪರ್ಸೆಂಟ್ ಕಸ್ಟಮ್ಸ್ ಸುಂಕ ವಂಚನೆ ಆಗಿದೆ. ಒಟ್ಟು 4,83,72,694 ರೂ. ಸುಂಕ ವಂಚನೆ ಆಗಿದೆ. ಜಾಮೀನು ಕೊಟ್ಟರೆ ದೇಶ ಬಿಡುವ ಸಾಧ್ಯತೆ ಇದೆ. ಪ್ರಭಾವಿಗಳು ಪ್ರಕರಣದಲ್ಲಿದ್ದು ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆ ಇದೆ ಎಂಬ ಕಾರಣದಿಂದಾಗಿ ಜಾಮೀನು ಅರ್ಜಿ ವಜಾ ಮಾಡಲಾಗಿದೆ.
ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ಸದ್ಯ ಪ್ರಕರಣ ಸಂಬಂಧ ಮೂರನೇ ಆರೋಪಿಯನ್ನು ಕೂಡ ಬಂಧಿಸಲಾಗಿದೆ.