ನವದೆಹಲಿ, ಮಾ.28(DaijiworldNews/TA): ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿಯಾದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕ ಕಾಂಗ್ರೆಸ್ನ ಜಿಲ್ಲಾ ಅಧ್ಯಕ್ಷರು ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜಕೀಯದಲ್ಲಿ, ಆಡಳಿತಾರೂಢ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ಆಗುತ್ತಿರುವಂತಹ ಸಂದರ್ಭದಲ್ಲೇ ಈ ಭೇಟಿ ನಡೆದಿರೋದು ಇದೀಗ ಕುತನೂಹಲಕ್ಕೆ ಕಾರಣವಾಗಿದೆ. ಈ ಮದ್ಯೆಯೇ ಬುಧವಾರ ಸಚಿವ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು.