ಮುಜಫರ್ಪುರ, ಏ.16 (DaijiworldNews/AA): ಅಡುಗೆ ಸಿಲಿಂಡರ್ಗಳು ಸ್ಫೋಟಗೊಂಡ ಪರಿಣಾಮ ಅಗ್ನಿ ಅವಘಡ ಸಂಭವಿಸಿ ನಾಲ್ವರು ಮಕ್ಕಳು ಸುಟ್ಟು ಕರಕಲಾದ ಘಟನೆ ಬಿಹಾರದ ಮುಜಫರ್ಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಮುಜಫರ್ ಪುರ ಜಿಲ್ಲೆಯ ಬರಿಯಾರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರಮಣಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ವಿಪುಲ್ ಕುಮಾರ್ (5), ಬ್ಯೂಟಿ ಕುಮಾರಿ (8), ಹನ್ಸಿಕಾ ಕುಮಾರಿ (3) ಮತ್ತು ಶ್ರಿಷ್ಟಿ ಕುಮಾರಿ (4) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ನಾಲ್ವರು ಮಕ್ಕಳು ಸುಟ್ಟು ಕರಕಲಾಗಿದ್ದಾರೆ. ಮಾಹಿತಿ ಬಂದ ತಕ್ಷಣ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದವು. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.