ನವದೆಹಲಿ, ಆ 21 (DaijiworldNews/SM): ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರುತ್ತಿದ್ದ ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಬಂಧಿಸಲಾಗಿದೆ.
ಮಂಗಳವಾರದಂದು ಚಿದಂಬರಂ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಇಂದು ಅವರನ್ನು ಅವರ ನಿವಾಸದಲ್ಲಿ ಸಿಬಿಐ, ಇಡಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಹಾಗೂ ನಿರಂತರ ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆ.