ಭಟ್ಕಳ, ಆ.30(Daijiworld News/SS): ಲಾರಿ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಡೀಸೆಲ್ ಟ್ಯಾಂಕಿಗೆ ಬೆಂಕಿ ತಗುಲಿ ರಸ್ತೆ ಮಧ್ಯೆದಲ್ಲಿಯೇ ಟ್ಯಾಂಕರ್ ಮತ್ತು ಲಾರಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೈಲೂರು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಕೇರಳ ಹಾಗೂ ಕರ್ನಾಟಕದ ಬಿಜಾಪುರ ಮೂಲದ ಲಾರಿ ಮತ್ತು ಟ್ಯಾಂಕರ್'ಗಳ ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಡೀಸೆಲ್ ಟ್ಯಾಂಕರ್ ಮತ್ತು ಲಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ. ಅದೃಷ್ಟವಶಾತ್ ಲಾರಿ ಮತ್ತು ಟ್ಯಾಂಕರ್'ನಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.