ಬಳ್ಳಾರಿ,ಅ 6 (Daijiworld News/RD): ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದರೆ ದೇಶದ್ರೋಹ ಪ್ರಕರಣ ದಾಖಲಿಸುತ್ತಾರೆ. ದೇಶದಲ್ಲಿ ಸರ್ವಾಧಿಕಾರಿ ಧೋರಣೆ ವ್ಯಕ್ತವಾಗುತ್ತಿದ್ದು, ಹಿಟ್ಲರ್ ಪ್ರವೃತ್ತಿ ಮೋದಿಯವರಲ್ಲಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಮೋದಿಯವರ ಮುಂದೆ ತಮ್ಮ ಸ್ವಾಭಿಮಾನ ಕಳೆದುಕೊಂಡಿದ್ದಾರೆ. ಪ್ರಧಾನಿ ಭೇಟಿಗೆ ಯಡಿಯೂರಪ್ಪ ಅಪಾಯಿಂಟ್ಮೆಂಟ್ ಕೇಳಿದಾಗ ನಾಲ್ಕು ಬಾರಿ ಕ್ಯಾನ್ಸಲ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಕೆಂದ್ರ ನೆರೆ ಪರಿಹಾರ ಘೋಷಣೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇನ್ನು ಹಳೆಯ ಕಾಲದ ನೀತಿ ಅನುಸರಿಸುತ್ತಿದ್ದು, ಎನ್ಡಿಆರ್ ಎಫ್, ಎಸ್ಡಿಆರ್ ಎಫ್ ಮಾರ್ಗಸೂಚಿಗಳ ಪ್ರಕಾರ ಇಂದು ನೆರೆ ಪರಿಹಾರ ಹಣ ಬಿಡುಗಡೆಯಾಗದು ಓಬೆರಾಯನ ಕಾಲದ ನೀತಿಗಳು ಬದಲಾಗಬೇಕಿದೆ ಎಂದು ಹೇಳಿದ್ದಾರೆ.