ಕಾಸರಗೋಡು, ಡಿ 24 (Daijiworld News/PY) : ಹಾವು ಕಡಿದು ಯುವತಿಯೋರ್ವಳು ಮೃತಪಟ್ಟ ಘಟನೆ ಸೋಮವಾರ ಕುಂಬಳೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಪೇರಾಲ್ ಕಣ್ಣೂರು ಕಾಮನಬೈಲ್ನ ಊರ್ಮಿಳಾ (20) ಎಂದು ಗುರುತಿಸಲಾಗಿದೆ.
ಎರ್ನಾಕುಲಂನ ಸಂಸ್ಥೆಯೊಂದರಲ್ಲಿ ಕೆಲಸಕ್ಕಿದ್ದ ಊರ್ಮಿಳಾ ಒಂದು ವಾರದ ರಜೆಯಲ್ಲಿ ಊರಿಗೆ ಬಂದಿದ್ದರು. ಮಧ್ಯಾಹ್ನದ ವೇಳೆ ಅಡುಗೆ ಕೋಣೆಯಲ್ಲಿ ಹಾವು ಕಡಿದು ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.