ಬೆಂಗಳೂರು, ಜ 20 (Daijiworld News/MB) : ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕೆಲಸ ತಡೆಹಿಡಿಯಲು ಸೂಚನೆ ನೀಡಲಾಗಿದೆ. ಮೈತ್ರಿ ಸರ್ಕಾರ ವೇಳೆ ನನ್ನ ಕ್ಷೇತ್ರಕ್ಕೆ ಸೇರಿದಂತೆ ಬೇರೆ ಕ್ಷೇತ್ರಕ್ಕೆ ಮಂಜೂರಾದ ಅಭಿವೃದ್ಧಿ ಕೆಲಸ ತಡೆಹಿಡಿಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಜಿ ಸಚಿವ ಡಿ ಕೆ ಶಿವಕುಮಾರ್ ಆರೋಪ ಮಾಡಿದರು.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ ಅಮಿತ್ ಶಾ ರಾಜ್ಯ ಭೇಟಿ ವೇಳೆ ಮಹದಾಯಿ ವಿಚಾರ ಪ್ರಸ್ತಾಪಿಸದ ವಿಚಾರದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಅವರ ಪಕ್ಷದ ಶಾಸಕರ ಕ್ಷೇತ್ರದ ಅಭಿವೃದ್ಧಿ ಮಾತ್ರ ಬೇಕಾಗಿರುವುದು. ಬೇರೆ ಪಕ್ಷದ ಶಾಸಕರ ಕ್ಷೇತ್ರದ ಅಭಿವೃದ್ಧಿ ಅವರಿಗೆ ಬೇಕಾಗಿಲ್ಲ. ಮಹದಾಯಿ, ಕಾವೇರಿ, ಕೃಷ್ಣಾನೂ ಬೇಕಾಗಿಲ್ಲ ಎಂದು ದೂರಿದರು.
ಕೆಪಿಸಿಸಿಯಲ್ಲಿ ನಾಲ್ಕು ಜನ ಕಾರ್ಯಧ್ಯಕ್ಷ ಹುದ್ದೆಯ ಬಗ್ಗೆ ಮಾತನಾಡಿ, ಕಾಂಗ್ರೆಸ್ನಲ್ಲಿ ನೀಡಲಾಗುವ ಸ್ಥಾನಮಾನದ ಬಗ್ಗೆ ನಾನು ಏನನ್ನು ಹೇಳುವುದಿಲ್ಲ. ನಾನು ಗುಂಪು ಕಟ್ಟಲ್ಲ. ಯಾವ ಹೇಳಿಕೆಯೂ ನೀಡಲ್ಲ ಎಂದು ಹೇಳಿದ್ದಾರೆ.
ಯಾರು ಎಷ್ಟು ಬಣ ಕಟ್ಟಿಕೊಳ್ಳುತ್ತಾರೋ ತಿಳಿದಿಲ್ಲ. ಯಾರು ಏನನ್ನು ಹೇಳುತ್ತಾರೆ ಮತ್ತು ಮಾಧ್ಯಮಗಳು ಏನು ತೋರಿಸುತ್ತಿದೆ ಅನ್ನುವುದು ನನಗೆ ತಿಳಿದಿದೆ ಎಂದು ಹೇಳಿದ್ದಾರೆ.