ನವದೆಹಲಿ, ಮಾ.16 (Daijiworld News/MB) : ನಿರ್ಭಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ಮುಕೇಶ್ ಸಿಂಗ್ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕಾರ ಮಾಡಿದ್ದು ಹತ್ಯಾಚಾರಿಗಳು ಗಲ್ಲು ಶಿಕ್ಷೆಯಿಂದ ಪಾರಾಗುವ ತಮ್ಮ ಪ್ರಯತ್ನವನ್ನು ಬಿಟ್ಟಿಲ್ಲ. ಇದೀಗ ಅಪರಾಧಿಗಳು ಅಂತರಾಷ್ಟ್ರೀಯ ನ್ಯಾಯಾಲಯದ ಬಾಗಿಲು ಬಡಿದಿದ್ದಾರೆ.
2012ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಮೂವರು ಅಪರಾಧಿಗಳಾದ ಅಕ್ಷಯ್ ಕುಮಾರ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ ಮಾರ್ಚ್ 20ರಂದು ನಿಗದಿಯಾಗಿರುವ ಗಲ್ಲುಶಿಕ್ಷೆಗೆ ತಡೆ ನೀಡಬೇಕೆಂದು ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಕಾನೂನಾತ್ಮಕವಾಗಿ ಎಲ್ಲಾ ಸೋಲು ಕಂಡಿರುವ ಅವರು ಈಗ ಅಂತರ್ ರಾಷ್ಟ್ರೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಮೂಲಕ ದಾರಿಯನ್ನು ಹುಡುಕಿಕೊಂಡಿದ್ದಾರೆ. ಹಾಗಾಗಿ ಈ ಬಾರಿಯೂ ಡೆತ್ ವಾರಂಟ್ ಮುಂದೂಡುವ ಸಾಧ್ಯತೆ ಇದೆ.
ಈಗಾಗಲೇ ಮೂರು ಬಾರಿ ಗಲ್ಲು ಶಿಕ್ಷೆ ಮುಂದೂಡಲ್ಪಟ್ಟಿದ್ದು ದೆಹಲಿ ಹೈಕೋರ್ಟ್ ಹೊಸದಾಗಿ ಮಾರ್ಚ್ 20ರ ಬೆಳಗ್ಗೆ 5.30ಕ್ಕೆ ನಾಲ್ವರು ಅಪರಾಧಿಗಳಿಗೆ ಡೆತ್ ವಾರಂಟ್ ಹೊರಡಿಸಿದೆ.