ನವದೆಹಲಿ, ಮಾ.19 (Daijiworld News/MB) : ಕೊರೊನಾ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಿಐಎಸ್ಸಿಇಯು 2019–20ನೇ ಸಾಲಿನ 10ನೇ (ಐಸಿಎಸ್ಇ) ಮತ್ತು 12ನೇ (ಐಸಿಎಸ್ಇ) ತರಗತಿಯ ಪರೀಕ್ಷೆಗಳನ್ನು ಮುಂದೂಡಿದೆ.
ಈ ಕುರಿತಾಗಿ ಮಾಹಿತಿ ನೀಡಿರುವ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ನ (ಸಿಐಎಸ್ಸಿಇ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೆರ್ರಿ ಅರಾಥೂನ್ರವರು "ಮಾರ್ಚ್ 19ರಿಂದ 30ರ ವರೆಗೆ ನಡೆಯಲಿದ್ದ ಪರೀಕ್ಷೆಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮುಂದೂಡಲಾಗಿದೆ" ಎಂದು ತಿಳಿಸಿದ್ದಾರೆ.
ಹೊಸ ವೇಳಾಪಟ್ಟಿ ಪ್ರಕಟವಾದ ನಂತರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿದು ಬಂದಿದೆ.
ಈಗಾಗಲೇ ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮಾರ್ಚ್ 31ರವರೆಗೆ ಮುಂದೂಡಿದ್ದು ಆ ಬಳಿಕ ಹೊಸ ವೇಳಾಪಟ್ಟಿ ಪ್ರಕಟ ಮಾಡಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ)ಯು ಬುಧವಾರ ಪ್ರಕಟನೆಯಲ್ಲಿ ತಿಳಿಸಿದೆ.