ನವದೆಹಲಿ, ಮಾ. 24 (Daijiworld News/MSP) : ದೇಶದಲ್ಲಿ ಕೊರೋನಾ ವೈರಸ್ ರುದ್ರ ನರ್ತನ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ. ದೇಶದಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದರೂ ಜನ ಕೊರೊನಾದ ಗಂಭೀರತೆಯನ್ನು ಲಘುವಾಗಿ ಪರಿಗಣಿಸಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ರಾತ್ರಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, "ಕೋವಿಡ್-19 ರ ಭೀತಿಗೆ ಸಂಬಂಧಿಸಿದ ಪ್ರಮುಖ ಅಂಶಗಳ ಕುರಿತು 2020 ರ ಮಾರ್ಚ್ 24 ರಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದೇವೆ" ಎಂದು ವಿವರಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಪ್ರಧಾನಿ ಮಾಡಲಿರುವ ಎರಡನೇ ಭಾಷಣ ಇದಾಗಲಿದೆ.