ಬೆಂಗಳೂರು, ಮಾ.30 (DaijiworldNews/PY) : ಪ್ರಧಾನ ಮಂತ್ರಿಯವರು ಕೊರೊನಾ ವೈರಸ್ ನಿಯಂತ್ರಿಸುವ ಸಲುವಾಗಿ ಕರೆ ನೀಡಿರುವ ಲಾಕ್ಡೌನ್ನ ಅವಧಿಯನ್ನು ನಾಗರಿಕರು ಎಷ್ಟು ಕಟ್ಟುನಿಟ್ಟಿನಿಂದ ಪಾಲನೆ ಮಾಡುತ್ತಾರೆ ಎನ್ನುವುದರ ಮೇಲೆ ಅವಲಂಭಿಸಿದೆ. ಹಾಗಾಗಿ ಎಲ್ಲರ ಒಳಿತಿಗಾಗಿ ನಾಡಿನ ಜನತೆ ಲಾಕ್ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಿಎಂ ಬಿಎಸ್ವೈ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಆದರೆ, ಕಫ್ರ್ಯೂ ಧಿಕ್ಕರಿಸಿ ಕೆಲವು ನಗರ ಪ್ರದೇಶದ ಜನರು ರಸ್ತೆಗಳಲ್ಲಿ ಓಡಾಡುವುದು ಮಾಡುತ್ತಿದ್ದಾರೆ. ಲಾಕ್ಡೌನ್ ಅನ್ನು ಎಲ್ಲರೂ ಪಾಲಿಸಿ, ನಿಮ್ಮ ಹಿತವನ್ನೇ ಪೊಲೀಸರು ಕೂಡಾ ಬಯಸುವವರು. ಅವರೇನು ನಿಮ್ಮ ವೈರಿಗಳಲ್ಲ. ಪೊಲೀಸರಿಗೆ ಅನಿವಾರ್ಯತೆಯನ್ನು ಸೃಷ್ಠಿಸಬೇಡಿ ಎಂದು ತಿಳಿಸಿದರು.
ಲಾಕ್ ಡೌನ್ ಅವಧಿಯ ಬಾಕಿಯಿರುವ 16 ದಿನಗಳಲ್ಲಿ ನಿಮ್ಮ ಮನೆಯಲ್ಲಿಯೇ ಇರಿ. ನಿಮಗೆ ಮನೆಯವರೊಂದಿಗೆ ಕಾಲ ಕಳೆಯಲು ಒದಗಿ ಬಂದ ಒಂದು ಸದಾವಕಾಶ ಎಂದು ಭಾವಿಸಿ. ಎಷ್ಟು ಮನೆಯ ಒಳಗಡೆ ನೀವು ಇರುತ್ತೀರೋ ಅದರಿಂದ ನಿಮಗೆ ಹಾಗೂ ದೇಶಕ್ಕೆ ಒಳ್ಳೆಯದಾಗುತ್ತದೆ. ಪುಸ್ತಕಗಳನ್ನು ಓದಿರಿ. ಮತ್ತುಬಡವರು ಕೂಡ ನೀವಿದ್ದ ಸ್ಥಳದಲ್ಲಿಯೇ ಸಕಾರಾತ್ಮಕ ಸದಾಕಾಲ ಚಟುವಟಿಕೆಗಳಲ್ಲಿ ಕಾಲ ಕಳೆಯಿರಿ ಎಂದು ಹೇಳಿದ್ದಾರೆ.
ಸರ್ಕಾರ ನಿಮ್ಮ ಆಹಾರ, ಊಟಕ್ಕೆ ತೊಂದೆರೆಯಾಗದಂತೆ ಎಚ್ಚರವಹಿಸಿದೆ. ಯಾವುದೇ ಸುಳ್ಳು ಸುದ್ದಿಗಳಿಗೆ ಮತ್ತು ವದಂತಿಗಳಿಗೆ ಕಿವಿಗೊಡಬೇಡಿ. ಎಷ್ಟು ಕಟ್ಟುನಿಟ್ಟಿನಿಂದ ನೀವು ಮನೆಯಲ್ಲಿ ಇರುವುದನ್ನು ಪಾಲಿಸುತ್ತೀರೋ ಅಷ್ಟು ಬೇಗ ಅಂದರೆ, ಎ.14 ಕ್ಕೆ ಲಾಕ್ಡೌನ್ ಮುಗಿಯುವುದು. ನಿಮ್ಮ ಕರ್ಫ್ಯೂ ಪಾಲನೆ ಮೇಲೆ ಲಾಕ್ಡೌನ್ ಪರಿಸ್ಥಿತಿ ಅವಲಂಬಿತವಾಗಿದೆ ಎಂದು ತಿಳಿಸಿದರು.