ನವದೆಹಲಿ, ಎ.26 (DaijiworldNews/PY) : ಇದುವರೆಗೂ ದೇಶದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಇದುವರೆಗೂ ಕೈಗೊಂಡಿರುವ ಪರೀಕ್ಷೆಗಳ ಸಂಖ್ಯೆ ಅತ್ಯಂತ ಕಡಿಮೆ. ಪ್ರಧಾನಿ ಮೋದಿ ಅವರು ತಕ್ಷಣ ದೇಶದಲ್ಲಿ ಸಾಮೂಹಿಕ ಕೊರೊನಾ ಪರೀಕ್ಷೆಗೆ ಮುಂದಾಗಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪರೀಕ್ಷೆಗೆ ಹೆಚ್ಚು ಹೆಚ್ಚು ಜನರನ್ನು ಗುರಿಪಡಿಸುವುದರಿಂದ ಸೋಂಕು ನಿಯಂತ್ರಣ ಸಾಧ್ಯ. ದೇಶದಲ್ಲಿ ದಿನವೊಂದಕ್ಕೆ ಮಹಾಮಾರಿ ಕೊರೊನಾ ವೈರಸ್ ಅನ್ನು ನಿಯಂತ್ರಿಸಬಹುದು. ಪರೀಕ್ಷೆಗೆ ಹೆಚ್ಚು ಹೆಚ್ಚು ಜನರನ್ನು ಒಳಪಡಿಸಿದಾಗ ಕೇಂದ್ರ ಸರ್ಕಾರಕ್ಕೆ ಪರಿಸ್ಥಿತಿಯನ್ನು ಸರಿಯಾಗಿ ಅವಲೋಕಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ತಕ್ಷಣವೇ ದೇಶದಲ್ಲಿ ಜನತೆಗೆ ಸಾಮೂಹಿಕ ಕೊರೊನಾ ಪರೀಕ್ಷೆಗೆ ಮುಂದಾಗಬೇಕು ಎಂದಿದ್ದಾರೆ.
ಅಲ್ಲದೇ, ಕೇಂದ್ರ ಸರ್ಕಾರವು ವಲಸೆ ಕಾರ್ಮಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು. ವಲಸೆ ಕಾರ್ಮಿಕರು ಸುರಕ್ಷಿತವಾಗಿ ಮನೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.