ಮುಂಬೈ, ಏ 29 (Daijiworld News/MSP): ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ವಿಧಿವಶರಾಗಿದ್ದಾರೆ. 54 ವರ್ಷದ ಇರ್ಫಾನ್ ಖಾನ್ ಅವರ ಆರೋಗ್ಯ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
2018 ರಲ್ಲಿ ಇವರು ಕ್ಯಾನ್ಸರ್ (ನ್ಯೂರೋಎಂಡೋಕ್ರೈನ್ ಗೆಡ್ಡೆ)ಯಿಂದ ಬಳಲುತ್ತಿದ್ದನೆಂದು ಘೋಷಿಸಿಕೊಂಡಿದ್ದರು. ಇರ್ಫಾನ್ ಖಾನ್ 2019 ರಲ್ಲಿ ಹಲವಾರು ತಿಂಗಳುಗಳ ಕಾಲ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಂಡ ಬಳಿಕ ಚೇತರಿಸಿಕೊಂಡಿದ್ದು, ಭಾರತಕ್ಕೆ ಹಿಂದಿರುಗಿದ ನಂತರ ʼಇಂಗ್ಲೀಷ್ ಮೀಡಿಯಂʼ ಎಂಬ ಚಿತ್ರದಲ್ಲಿ ನಟಿಸಿದ್ದರು. ಕೆಲ ದಿನಗಳ ಹಿಂದಷ್ಟೆ ಇರ್ಫಾನ್ ಖಾನ್ ಅವರ ತಾಯಿ ನಿಧನರಾಗಿದ್ದಾರೆ. ಮನೆಯಿಂದ ದೂರವಿದ್ದ ನಟ ಇರ್ಫಾನ್ ಖಾನ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ತಾಯಿಗೆ ಅಂತಿಮ ನಮನ ಸಲ್ಲಿಸಿದ್ದರು. ಇದಾದ ಮರು ದಿನವೇ ಇರ್ಫಾನ್ ಖಾನ್ ಆರೋಗ್ಯ ಪರಿಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.