ಬೆಂಗಳೂರು, ಏ 30 (Daijiworld News/MSP): ಮಾಜಿ ಮಾಫಿಯಾ ನಾಯಕ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಆರೋಗ್ಯ ಇತ್ತೀಚೆಗೆ ಬಿಗಡಾಯಿಸಿತ್ತು. ಇದೀಗ ಮತ್ತೆ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಯ ಕರ್ನಾಟಕ ಸಂಘಟನೆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಇವರಿಗೆ 2018ರಲ್ಲಿ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು. ಅಂದಿನಿಂದ ಇವರು ತಮ್ಮ ವಿಲ್ ಪವರ್ನಿಂದಲೇ ಕ್ಯಾನ್ಸರ್ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದಾರೆ. ದೇಹಕ್ಕೆ ಐದು ಬುಲೆಟ್ ಬಿದ್ದರೂ ಹೆದರಿರಲಿಲ್ಲ. ಈಗ ಈ ಕ್ಯಾನ್ಸರ್ಗೆ ಹೆದರುತ್ತೇನೆಯೇ ಆದರೆ ನನ ಕೊನೆಯ ಉಸಿರುವವರೆಗೂ ಕ್ಯಾನ್ಸರ್ ವಿರುದ್ಧ ಹೋರಾಟ ಮಾಡುತ್ತೇನೆ ಎಂದಿದ್ದರು.