ನವದೆಹಲಿ, ಜೂ.16 (DaijiworldNews/MB) : ಭಾರತ–ಚೀನಾ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಕಾರಣದಿಂದಾಗಿ ಉಭಯ ರಾಷ್ಟ್ರಗಳ ಮೇಜರ್ ಜನರಲ್ ಮಟ್ಟದ ಮಾತುಕತೆ ಆರಂಭವಾಗಿದೆ ಎಂದು ವರದಿ ತಿಳಿಸಿದೆ.
ಲಡಾಖ್ನ ಪೂರ್ವಭಾಗದ ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಚೀನಾ ಭಾರತ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಈ ಸಂದರ್ಭದಲ್ಲಿ ಭಾರತದ ಸೇನಾಪಡೆಯ ಅಧಿಕಾರಿ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದೆ. ಚೀನಾದ ಸೇನೆಗೂ ಹಾನಿಯಾಗಿದೆ ಎಂದು ಹೇಳಲಾಗಿದೆ.
ಇನ್ನು ಚೀನಾ ಭಾರತೀಯ ಯೋಧರೇ ನಮ್ಮ ಯೋಧರ ಮೇಲೆ ದಾಳಿ ನಡೆಸಿ ಕೆಣಕಿದ್ದಾರೆ ಎಂದು ಆರೋಪಿಸಿದ್ದು ಈ ಬಗ್ಗೆ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯನ್ ಮಾತನಾಡಿ, ಸೋಮವಾರ ರಾತ್ರಿ ಭಾರತದ ಸೇನೆ ಎರಡು ಬಾರಿ ಗಡಿ ದಾಟಿ ನಮ್ಮ ಸೇನೆಯ ಮೇಲೆ ದಾಳಿ ಮಾಡಿದೆ. ಇದರಿಂದಾಗಿ ಎರಡು ದೇಶಗಳ ಯೋಧರಿಗೆ ಹಾನಿಯಾಯಿತು ಎಂದು ದೂರಿದ್ದಾರೆ.