ಬೆಂಗಳೂರು, ಆ 06 (DaijiworldNews/PY): ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ಎನ್ನುವ ಸುದ್ದಿ ಸುಳ್ಳು. ಇನ್ನೂ ಕೂಡಾ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದ ದಿನಾಂಕವನ್ನು ನಿಗದಿಮಾಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ವಿಚಾರವಾಗಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, ಆಗಸ್ಟ್ 7ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ ಎನ್ನುವ ಸುದ್ದಿ ಸುಳ್ಳು. ಈ ಬಗ್ಗೆ ಇನ್ನೂ ದಿನಾಂಕ ಅಂತಿಮವಾಗಿಲ್ಲ. ಶಿಕ್ಷಣ ಇಲಾಖೆಯು ಅಧಿಕೃತವಾಗಿ ಸಮಗ್ರ ಮಾಹಿತಿ ನೀಡಲಿದೆ ಎಂದು ಹೇಳಿದ್ದಾರೆ.
ಕೊರೊನಾದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದಿದೆ. ವಿದ್ಯಾರ್ಥಿಗಳು ಕೂಡಾ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿದ್ದಾರೆ. ಅವರು ಫಲಿತಾಂಶವನ್ನು ನಿರೀಕ್ಷಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಆಗಸ್ಟ್ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ ಮಾಡುವುದಾಗಿ ಶಿಕ್ಷಣ ಸಚಿವರು ಎಂದು ತಿಳಿಸಿದ್ದರು. ಈಗ ಪರೀಕ್ಷಾ ಫಲಿತಾಂಶ ಪ್ರಕಟ ಮಾಡುವುದು ಮತ್ತಷ್ಟು ತಡವಾಗಲಿದೆ ಎಂದಿದ್ದಾರೆ.