ಚಾಯ್ಬಾಸಾ, ಸೆ 04 (DaijiworldNews/PY): ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 18 ಸುಧಾರಿತಾ ಸ್ಪೋಟಕ ಸಾಧನ(ಐಇಡಿ)ಗಳನ್ನು ಭದ್ರತಾ ಪಡೆಗಳು ಪತ್ತೆ ಮಾಡಿ ಅದನ್ನು ನಿಷ್ಕ್ರಿಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೃತ್ಯವನ್ನು ನಿಷೇಧಿತ ಮಾವೋವಾದಿ (ಸಿಪಿಐ) ಉಗ್ರರು ಮಾಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಮೀಸಲು ಪಡೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ ಗೋಯಿಲ್ಕೆರಾ ಪೊಲೀಸ್ ಠಾಣೆ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಈ ಸುಧಾರಿತ ಸ್ಪೋಟಕಗಳು ಪತ್ತೆಯಾಗಿದ್ದು, ಬಳಿಕ ಅದನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿಗಳನ್ನು ಗುರಿಯಾಗಿಸಿಕೊಂಡು ಐಇಡಿಗಳನ್ನು ಹಾಕಲಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಬಾಂಬ್ ನಿಷ್ಕ್ರಿಯದಳದವರು ಈ ಪ್ರದೇಶವನ್ನು ತಲುಪಿ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ.