ಹೊಸದಿಲ್ಲಿ, ಸೆ.10(DaijiworldNews/HR): ಪಶ್ಚಿಮ ಬಂಗಾಳ ಕಾಂಗ್ರೆಸ್ ನ ನೂತನ ಅಧ್ಯಕ್ಷರನ್ನಾಗಿ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರು ಆಯ್ಕೆ ಮಾಡಿದ್ದಾರೆ.
ಈ ಹಿಂದೆ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋಮೆನ್ ಮಿತ್ತಾ ಕಳೆದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ನೂತನ ಅಧ್ಯಕ್ಷರನ್ನಾಗಿ ಅಧೀರ್ ಚೌಧರಿಯವರನ್ನು ಆಯ್ಕೆ ಮಾಡಲಾಗಿದೆ.
ಇನ್ನು ಲೋಕಸಭಾ ಸದಸ್ಯರಾಗಿರುವ ಅಧಿರ್ ರಂಜನ್ ಚೌಧರಿ ಅವರು ಲೋಕಸಭೆಯಲ್ಲಿ ಪ್ರಸ್ತತ ವಿಪಕ್ಷ ನಾಯಕರಾಗಿದ್ದಾರೆ.