ನವದೆಹಲಿ, ಅ. 25 (DaijiworldNews/HR) : ಹತ್ರಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ನಡೆದುಕೊಂಡಂತೆ ಪಂಜಾಬ್ ಸರ್ಕಾರ ನಡೆದುಕೊಂಡಿಲ್ಲ. ಪಂಜಾಬ್ ಸರ್ಕಾರ ಕೂಡ ಅದೇ ರೀತಿ ವರ್ತಿಸಿದ್ದರೆ ಅಲ್ಲಿಯೂ ಹೋಗಿ ಪ್ರತಿಭಟನೆ ಮಾಡುತ್ತಿದ್ದೆ. ಆದರೆ ಅಲ್ಲಿರುವುದು ಜವಾಬ್ದಾರಿಯುತ ಸರ್ಕಾರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪಂಜಾಬ್ ಮತ್ತು ರಾಜಸ್ಥಾನ ಸರಕಾರಗಳು, ಉತ್ತರಪ್ರದೇಶ ಸರಕಾರದಂತೆ ಹೆಣ್ಣುಮಕ್ಕಳ ಅತ್ಯಾಚಾರ ಪ್ರಕರಣವನ್ನು ನಿರ್ಲಕ್ಷಿಸುತ್ತಿಲ್ಲ. ಸಂತ್ರಸ್ತೆಯ ಕುಟುಂಬಕ್ಕೆ ಬೆದರಿಕೆ ಹಾಕುತ್ತಿರಲಿಲ್ಲ. ಆ ಕುಟುಂಬಕ್ಕೆ ನ್ಯಾಯ ದೊರೆಯುವುದನ್ನು ತಡೆಯುತ್ತಿರಲಿಲ್ಲ. ಒಂದು ವೇಳೆ ಹಾಗೇನಾದರೂ ಆದರೆ, ನಾನೇ ಅಲ್ಲಿಗೆ ಹೋಗಿ ನ್ಯಾಯಕ್ಕಾಗಿ ಹೋರಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ರಾಹುಲ್ ಗಾಂಧಿ ಮಾಡಿರುವ ಈ ಟ್ವೀಟ್ ಅನ್ನು ನಟ ಪ್ರಕಾಶ್ ರಾಜ್ ಅವರು ದಟ್ಸ್ ದ ವೇ ಎಂದು ಮರು ಟ್ವೀಟ್ ಮಾಡಿದ್ದಾರೆ.