ನವದೆಹಲಿ, ಅ.29 (DaijiworldNews/PY): ರೆಮ್ಡೆಸಿವಿರ್ ಮತ್ತು ಫವಿಪಿರವೀರ್ ಎನ್ನುವ ಎರಡು ಔಷಧಿಗಳನ್ನು ಕೊರೊನಾ ಚಿಕಿತ್ಸೆಗಾಗಿ ಅನುಮೋದನೆ ಇಲ್ಲದೆ ಬಳಸಲಾಗುತ್ತಿದೆ ಎನ್ನುವ ಆರೋಪಕ್ಕೆ ಪ್ರಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ನೇತೃತ್ವದ ನ್ಯಾಯಪೀಠವು ಈ ಬಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದು, ನಾಲ್ಕು ವಾರಗಳಲ್ಲಿ ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಕೋರಿದೆ.
ಪ್ರಕರಣದ ಅರ್ಜಿದಾರ ಹಾಗೂ ವಕೀಲ ಎಂ.ಎಲ್.ಶರ್ಮಾ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರನ್ನೊಳಗೊಂಡಿದ್ದು, ಅಕ್ಟೋಬರ್ 15 ರ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ವರದಿ ಮತ್ತು ಈ ಔಷಧಿಗಳನ್ನು ಎಲ್ಲಿಯೂ ಅಧಿಕೃತವಾಗಿ ಕೊರೊನಾ ವೈರಸ್ಗೆಬಳಕೆ ಮಾಡಬಹುದೆಂದು ಅಧಿಕೃತವಾಗಿ ತಿಳಿಸಿಲ್ಲ ಎಂದು ಹೇಳಿದ್ದರು.
ಈ ಬಗ್ಗೆ ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.