ಶ್ರೀನಗರ, ಅ. 29 (DaijiworldNews/SM): ಕಾಶ್ಮೀರ ಗಡಿಯಲ್ಲಿ ಉಗ್ರರರ ಅಟ್ಟಹಾಸ ಮುಂದುವರಿದಿದ್ದು, ಮೂವರು ಬಿಜೆಪಿ ಮುಖಂಡರನ್ನು ಹತ್ಯೆ ಮಾಡಲಾಗಿದೆ.
ಕುಲ್ಗಾಂ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಫಿದಾ ಹುಸೇನ್, ಉಮರ್ ರಶೀದ್ ಮತ್ತು ಉಮರ್ ರಂಜಾನ್ ಅವರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಕುಲ್ಗಾಂ ಜಿಲ್ಲೆಯ ಖಾಜಿಗುಂಡ್ನ ವೈ ಕೆ ಪೊರಾ ಪ್ರದೇಶದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.
ಮೂವರು ವ್ಯಕ್ತಿಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಈ ಪೈಕಿ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ದಾಳಿಕೋರರನ್ನು ಬಂಧಿಸಲು ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ನಡೆಸಿದೆ. ಈ ನಡುವೆ ಕಾರ್ಯಕರ್ತರ ಮೇಲಿನ ದಾಳಿಯನ್ನು ಬಿಜೆಪಿ ಖಂಡಿಸಿದೆ.