ನವದೆಹಲಿ, ಅ.30 (DaijiworldNews/HR): ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನುಖಂಡಿಸಿದ್ದು, ಅವರು ಜಮ್ಮು ಕಾಶ್ಮೀರದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದ ಉತ್ಸಾಹಿ ಯುವಕರಾಗಿದ್ದರು ಎಂಬುದಾಗಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಮೂವರು ಕಾರ್ಯಕರ್ತರ ಹತ್ಯೆಯಾಗಿರುವುದನ್ನು ನಾನು ಖಂಡಿಸುತ್ತೇನೆ. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದ ಯುವಕರಾಗಿದ್ದರು ಎಂದು ಹೇಳಿದ್ದಾರೆ.
ಗುರುವಾರ ಸಂಜೆ ಕುಲ್ಗಾಮ್ ಜಿಲ್ಲೆಯ ವೈ.ಕೆ. ಪೊರಾ ಪ್ರದೇಶದಲ್ಲಿ ಫಿದಾ ಹುಸೈನ್, ಉಮರ್ ಹಜಾಮ್ ಮತ್ತು ಉಮರ್ ರಶೀದ್ ಬೇಗ್ ಮೇಲೆ ಉಗ್ರರು ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಖಾಜಿಗುಂಡ್ನ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.