ಪುಣೆ,ಅ.30 (DaijiworldNews/HR): ಮಹಾರಾಷ್ಟ್ರ ಸರ್ಕಾರವನ್ನು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ನಡೆಸುತ್ತಿದ್ದಾರೆ ಹೊರತು ಉದ್ಧವ್ ಠಾಕ್ರೆಯಲ್ಲ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಗುರುವಾರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಕಾಂತ್ ಪಾಟೀಲ್, ಯಾವುದೇ ಸಮಸ್ಯೆಗಳು ಬಗೆಹರಿಯಬೇಕಾದರೆ ಪವಾರ್ ಅವರನ್ನು ಭೇಟಿ ಮಾಡಬೇಕೇ ಹೊರತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನಲ್ಲ ಹೇಳಿದ್ದಾರೆ.
ಇನ್ನು ಶರದ್ ಪವಾರ್ ಅವರನ್ನು ಭೇಟಿಯಾಗಲು ಮಹಾರಾಷ್ಟ್ರ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ನೀಡಿದ ಸಲಹೆ ಕುರಿತು ಪ್ರತಿಕ್ರಿಯೆ ನೀಡುವಂತೆ ಪಾಟೀಲ್ ಅವರನ್ನು ಪ್ರಶ್ನಿಸಿದ್ದಕ್ಕೆ ಪವಾರ್ ಅವರೇ ಸರ್ಕಾರ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಯಾವುದೇ ಸಮಸ್ಯೆ ಬಗೆಹರಿಯಬೇಕಾದರೆ ಅಂತವರು ಪವಾರ್ ಅವರನ್ನು ಭೇಟಿ ಮಾಡಬೇಕು ಏಕೆಂದರೆ ಉದ್ಧವ್ ಹೊರಗೆ ಪ್ರಯಾಣಿಸುವುದೇ ಇಲ್ಲ. ಪವಾರ್ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಸುಲಭವಾಗಿ ಜನರಿಗೆ ಸಿಗುತ್ತಾರೆ. ಹಾಗಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಅಗತ್ಯವೇನು ಎಂದು ಜನರು ಯೋಚಿಸುತ್ತಾರೆ ಎಂದರು.