ಬೆಂಗಳೂರು,ಅ.30 (DaijiworldNews/HR): ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಕೈಗೊಂಡಿದ್ದು, ನಾನು ಪಕ್ಷ ನೋಡಿ ಅಥವಾ ನಿರ್ಮಾಪಕರು ಎಂದ ಮಾತ್ರಕ್ಕೆ ನಾನು ಪ್ರಚಾರಕ್ಕೆ ಇಳಿಯುವುದಿಲ್ಲ. ವ್ಯಕ್ತಿಯನ್ನು ನೋಡಿ ಪ್ರಚಾರಕ್ಕೆ ಬಂದಿದ್ದೇನೆ ಎಂದು ದರ್ಶನ್ ಹೇಳಿದ್ದಾರೆ.
ಮುನಿರತ್ನ ಅವರು ಕೊರೊನಾ ಲಾಕ್ ಡೌನ್ ವೇಳೆ ರಾಜರಾಜೇಶ್ವರಿ ನಗರ ಕ್ಷೇತ್ರದ ಜನತೆಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಆ ಒಂದು ಕಾರಣಕ್ಕೆ ಮಾನವೀಯತೆಯ ದೃಷ್ಟಿಯಿಂದ ಅವರ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದೇನೆ ಎಂದರು.
ಇನ್ನು ಸಂಕಷ್ಟಕ್ಕೆ ನಿಂತವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ. ಜೊತೆಗೆ ನನ್ನ ಆಪ್ತರು ಅವರು ಹಾಗಾಗಿ ಕರೆದಲ್ಲಿಗೆ ತೆರಳುತ್ತೇನೆ ಎಂದಿದ್ದಾರೆ.
ನಟ ದರ್ಶನ್ ಇಂದು ಇಡೀ ದಿನ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.