ಜಮ್ಮು, ಅ.30 (DaijiworldNews/HR): ಭದ್ರತಾ ಪಡೆಗಳು ಉಗ್ರರ ಅಡಗುದಾಣ ಧ್ವಂಸಗೊಳಿಸಿ, ಚೀನಾದ ಪಿಸ್ತೂಲ್ ಮತ್ತು ಸ್ಫೋಟಕಗಳೂ ಒಳಗೊಂಡಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಜಮ್ಮು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ಯೋಧರು ಉಗ್ರಗಾಮಿಗಳು ಅಡಗುತಾಣದಲ್ಲಿ ಇಟ್ಟುಕೊಂಡಿದ್ದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬುದಾಗಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೌರಿ ಚಂದನ್ ಕೊಹ್ಲಿ ಹೇಳಿದ್ದಾರೆ.
ಇನ್ನು ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ, ಜಮ್ಮು ಕಾಶ್ಮೀರ ಪೊಲೀಸರೊಂದಿಗೆ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ಆರಂಭಿಸಿದ ಬಳಿಕ ಗಂಭೀರ್ ಮುಘಲನ್ ನ ದಟ್ಟಾರಣ್ಯವನ್ನು ಬಳಸಿ ಕಾಡಿನ ಮೇಲ್ಮೈ ಕೆಳಗೆ ರಚಿಸಲಾದ ಅಡಗುತಾಣವನ್ನು ಕಂಡುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.