ಜೈಪುರ, ಅ. 31 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ತಡೆಯಲು ಶನಿವಾರ ರಾಜಸ್ಥಾನ ಸರ್ಕಾರ ನೂತನ ಮೂರು ಮಸೂದೆಗಳನ್ನು ಮಂಡಿಸಿದೆ.
ಮೂರು ಮಸೂದೆಗಳಾದ ಅಗತ್ಯ ಸರಕುಗಳ (ವಿಶೇಷ ನಿಬಂಧನೆಗಳು ಮತ್ತು ರಾಜಸ್ಥಾನ ತಿದ್ದುಪಡಿ) ಮಸೂದೆ 2020, ರೈತರ(ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ (ರಾಜಸ್ಥಾನ ತಿದ್ದುಪಡಿ) ಮಸೂದೆ 2020 ಮತ್ತು ರೈತರ ಉತ್ಪಾದನೆ ವ್ಯಾಪಾರ ಹಾಗೂ ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ 2020 ಅನ್ನು ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ಧಾರಿವಾಲ್ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಪಂಜಾಬ್ ಸರ್ಕಾರ ಕೇಂದ್ರದ ಕೃಷಿ ಕಾಯ್ದೆ ತಡೆಗೆ ಅಧಿವೇಶನದಲ್ಲಿ ನಾಲ್ಕು ಮಸೂದೆಗಳನ್ನು ಮತ್ತು ನಿರ್ಣಯಗಳನ್ನು ಅಂಗೀಕರಿಸಿದ್ದು, ಇದೀಗ ರಾಜಸ್ಥಾನ ಸರ್ಕಾರ ಕೂಡ ಕೃಷಿ ಕಾಯ್ದೆ ವಿರುದ್ಧ ಮಸೂದೆ ಮಂಡಿಸಿದೆ.