ಚೆನ್ನೈ,ಅ. 31 (DaijiworldNews/HR): ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ(72 ) ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಜೀವ ರಕ್ಷಕ ಅಳವಡಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ತಿಳಿಸಿದೆ.
ದೊರೈಕಣ್ಣಾ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಅವರಿಗೆ ಅಕ್ಟೋಬರ್ 13ರಂದು ಕೊರೊನಾ ಪರೀಕ್ಷೆ ಮಾಡಿಸಿದ್ದರು. ವರದಿ ಪಾಸಿಟಿವ್ ಬಂದಿದ್ದು, ಬಳಿಕ ಅವರನ್ನು ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿತ್ತು.
ಇದೀಗ ದೊರೈಕಣ್ಣಾ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಅರವಿಂದನ್ ಸೆಲ್ವರಾಜ್ ತಿಳಿಸಿದ್ದಾರೆ.