ಬೆಂಗಳೂರು,ಅ. 31 (DaijiworldNews/HR): ರಾಷ್ಟ್ರೀಯ ಪಕ್ಷಗಳ ವ್ಯಾಮೋಹದಿಂದ ಜನರು ಆದಷ್ಟು ಬೇಗ ಹೊರಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಬಿಜೆಪಿಯವರು ತಮ್ಮ ಅಧಿಕಾರಾವಧಿಯಲ್ಲಿ ಸರಿಯಾಗಿ ಕರ್ತವ್ಯ ನಿರ್ವಹಿಸಿದ್ದರೆ ಈಗೇಕೆ ಸೀರೆ, ಹಣ ಹಂಚುವಂತಹ ಪ್ರಮೇಯ ಬರುತ್ತಿತ್ತು. ಯಡಿಯೂರಪ್ಪ ಅವರು 6.5 ಕೋಟಿ ಕನ್ನಡಿಗರ ಭರವಸೆ ಈಡೇರಿಸಿಲ್ಲ. ಹೊರತಾಗಿ ಅವರನ್ನು ಮುಖ್ಯಮಂತ್ರಿ ಮಾಡಲು ಬೆಂಬಲ ನೀಡಿದ 17 ಶಾಸಕರ ಭರವಸೆ ಮಾತ್ರ ಈಡೇರಿಸಿದ್ದಾರೆ ಎಂದರು.
ಇನ್ನು ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಜೋರಾದ ಪ್ರಚಾರ ನಡೆಸುತ್ತಿದೆ. ಆದರೆ, ಅಲ್ಲಿಗೆ ಬರುತ್ತಿರುವ ಯಾರು ಸ್ಥಳೀಯರಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಈಗಾಗಲೇ ಎರಡು ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೇವೆ ಎಂದು ಯಡಿಯೂರಪ್ಪ ಹೇಳುತ್ತಿರುವುದು ಬಹಳ ಸಂಶಯಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.