ಬೆಂಗಳೂರು, ನ.01 (DaijiworldNews/HR): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಸಪ್ತಪದಿ ಕಾರ್ಯಕ್ರಮಕ್ಕೆ ನವೆಂಬರ್, ಡಿಸೆಂಬರ್ ನಲ್ಲಿ ಬದಲಾದ ಸ್ವರೂಪದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.
ಸಾಂರ್ಧರ್ಭಿಕ ಚಿತ್ರ
ಈ ಕುರಿತು ಮಾತನಾಡಿದ ಶ್ರೀನಿವಾಸ ಪೂಜಾರಿ , "ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಪ್ತಪದಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕೊರೊನಾ ಕಾರಣದಿಂದ ಮುಂದೂಡಾಲಾಗಿದ್ದು, ಇದೀಗ ನವೆಂಬರ್, ಡಿಸೆಂಬರ್ ನಲ್ಲಿ ನಡೆಯಲಿದೆ. ಸಾಮೂಹಿಕ ವಿವಾಹಗಳು ದತ್ತಿ ಇಲಾಖೆ ವ್ಯಾಪ್ತಿಗೆ ಬರುವ 100 ದೇವಾಸ್ಥಾನಗಳನ್ನು ಬೇರೆ ಬೇರೆ ದಿನಾಂಕದಂದು ನಡೆಯಲಿದೆ" ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ 100 ದತ್ತಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸಲಾಗುವುದು ಎಂದು ಏಪ್ರಿಲ್ 26 ಮತ್ತು ಮೇ 24 ರಂದು ಸರ್ಕಾರ ಘೋಷಿಸಿತ್ತು.
ಇನ್ನು ಇದೀಗ ರಾಜ್ಯದಲ್ಲಿ ಕೊರೊನಾ ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರವು ನವೆಂಬರ್ ಮತ್ತು ಡಿಸೆಂಬರ್ ನಡುವೆ ಬೇರೆ ಬೇರೆ ದಿನಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸಲು ತಿರ್ಮಾನಿಸಿದೆ.