ಚೆನ್ನೈ,ಅ. 31 (DaijiworldNews/HR): ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ(72 ) ನಿಧನರಾಗಿದ್ದಾರೆ.
ದೊರೈಕಣ್ಣಾ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಅವರಿಗೆ ಅಕ್ಟೋಬರ್ 13ರಂದು ಕೊರೊನಾ ಪರೀಕ್ಷೆ ಮಾಡಿಸಿದ್ದರು. ವರದಿ ಪಾಸಿಟಿವ್ ಬಂದಿದ್ದು, ಬಳಿಕ ಅವರನ್ನು ನಗರದ ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ ರಾತ್ರಿ ಸುಮಾರು 11.15ರ ವೇಳೆಗೆ ಮೃತರಾದರು ಎಂದು ಕಾವೇರಿ ಆಸ್ಪತ್ರೆಯ ಕಾರ್ಯಕಾರಿ ನಿರ್ದೇಶಕ ಡಾ. ಅರವಿಂದನ್ ಸೆಲ್ವರಾಜ್ ಅವರು ತಿಳಿಸಿದ್ದಾರೆ.
ನ್ಯುಮೋನಿಯಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ ಉತ್ತಮ ಚಿಕಿತ್ಸೆ ನೀಡಲಾಗಿತ್ತು. ವೆಂಟಿಲೇಟರ್ ಸಹಾಯದಿಂದ ಉಸಿರಾಟ ನಡೆಸಿದ್ದರು.
ತಮಿಳುನಾಡಿನ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.