ಅಗರ್ತಲಾ, ನ.01 (DaijiworldNews/PY): ಉತ್ತರ ತ್ರಿಪುರ ಜಿಲ್ಲೆಯ ಕಾಂಚನಪುರ ಉಪವಿಭಾಗದ ಬಾರ್ಹಲ್ದಿ ಹಳ್ಳಿಯಲ್ಲಿ 90 ವರ್ಷದ ವೃದ್ದೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಅತ್ಯಾಚಾರವೆಸಗಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಶನಿವಾರ ಪೊಲೀಸರು ಹೇಳಿದ್ದಾರೆ.
ಈ ಘಟನೆ ಅ.24ರಂದು ನಡೆದಿದ್ದು, ಈ ಸಂಬಂಧ ವೃದ್ದೆಯ ಕುಟುಂಬದವರು ಅ.29ರಂದು ದೂರು ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಗಳು ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭಾನುಪದ ಚಕ್ರವರ್ತಿ ಹೇಳಿದ್ದಾರೆ.
ವೃದ್ದೆ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಮನೆಗೆ ನುಗ್ಗಿ ಇಬ್ಬರು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರದ ಬಳಿಕ ವೃದ್ದೆ ಅಸ್ವಸ್ಥರಾಗಿದ್ದು, ಪೊಲೀಸರಿಗೆ ವಿಚಾರ ತಿಳಿಸಿರಲಿಲ್ಲ. ಈ ವಿಚಾರ ಸಂಬಂಧಿಕರ ಗಮನಕ್ಕೆ ಬಂದಿದ್ದು, ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ವೃದ್ದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ವೃದ್ದೆಯ ಹೇಳಿಕೆ ಪಡೆದುಕೊಂಡಿದ್ದಾರೆ. ವೃದ್ದೆಯ ಹೇಳಿಕೆಯ ಅನ್ವಯ ತನಿಖೆ ಪ್ರಾರಂಭಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.