ಬೆಂಗಳೂರು,ಅ. 31 (DaijiworldNews/HR): ರಾಜರಾಜೇಶ್ವರಿ ನಗರ ಉಪಚುಣಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ, ನಟ ದರ್ಶನ್ ವಿರುದ್ಧ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಆರೋಪದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಚುನಾವಣಾ ಪ್ರಚಾರದ ವೇಳೆ ನಟ ದರ್ಶನ್ ಕೊರೊನಾ ಮಾರ್ಗಸೂಚಿ ಪಾಲಿಸದೇ ಪ್ರಚಾರ ನಡೆಸಿದ್ದು, ಈ ಹಿನ್ನಲೆಯಲ್ಲಿ ನಟ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇನ್ನು ದೂರಿನಲ್ಲಿ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಪ್ರಚಾರದ ನಡೆಸಿದ ಸಂಧರ್ಭದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ.