ಲಖನೌ,ಅ. 31 (DaijiworldNews/HR): ನವಂಬರ್ 3 ರಂದು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಪರ ಮತದಾನ ಮಾಡುವ ಮೂಲಕ ವಿರೋಧಿಗಳಿಗೆ ಸಂದೇಶ ರವಾನಿಸೋಣ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಮತದಾರರಲ್ಲಿ ಹೇಳಿದ್ದರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ, "ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಉಪಚುನಾವಣೆಗಳಲ್ಲಿ ಬಿಎಸ್ಪಿ ಅಭ್ಯರ್ಥಿಗಳಿಗೆ ಮತ ನೀಡಿ. ಈ ಮೂಲಕ ನಾವು ವಿರೋಧಿಗಳಿಗೆ ಸರಿಯಾದ ರಾಜಕೀಯ ಸಂದೇಶ ರವಾನಿಸೋಣ" ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಮತ್ತೊಂದು ಟ್ವೀಟ್ ಮಾಡಿರುವ ಅವರು, ಜೆಡಿ(ಯು) ಮತ್ತು ಆರ್ಜೆಡಿ ಪಕ್ಷಗಳು ಅಲ್ಲಿ ಹೇಗೆ ಆಡಳಿತ ನಡೆಸಿವೆ ಎಂಬುದನ್ನು ನೀವು ನೋಡಿದ್ದೀರಿ. ಈಗ ನಮ್ಮ ಹೊಸ ಮೈತ್ರಿಗೂ ಒಂದು ಅವಕಾಶ ನೀಡಿ' ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.