ಔರಂಗಾಬಾದ್ ,ಅ. 31 (DaijiworldNews/HR): ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಗಡಿ ಪ್ರದೇಶಗಳು ಆದಷ್ಟು ಬೇಗ ಮಹಾರಾಷ್ಟ್ರಕ್ಕೆ ಸೇರಲಿವೆ ಎಂದು ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಜಯಂತ್ ಪಾಟೀಲ್, "ಮರಾಠಿ ಸಹೋದರರನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್ ಇಂದು ಕರಾಳ ದಿನ ಆಚರಿಸುತ್ತಿದ್ದು, ಪ್ರತಿಭಟನೆಯ ಅಂಗವಾಗಿ ಕಪ್ಪು ರಿಬ್ಬನ್ ಕಟ್ಟಿಕೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ.
ಕರ್ನಾಟಕದ ಮರಾಠಿ ಮಾತನಾಡುವವರಿಗೆ ನಡೆಯುತ್ತಿರುವ ಅನ್ಯಾಯ, ದೌರ್ಜನ್ಯ, ದಬ್ಬಾಳಿಕೆಯನ್ನು ಸಹಿಸಲಾಗುವುದಿಲ್ಲ. ಹಾಗಾಗಿ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು.
ಇನ್ನು ಕರ್ನಾಟಕ ಗಡಿ ಪ್ರದೇಶದಲ್ಲಿರುವ ಮರಾಠಿ ಜನರ ಸಮಸ್ಯೆಗಳನ್ನು ಆಲಿಸುವುದಕ್ಕಾಗಿ ಇಡೀ ಮಹಾರಾಷ್ಟ್ರ ಜನರಿದ್ದಾರೆ ಎಂದು ಹೇಳಿದ್ದಾರೆ.