ತಿರುವನಂತಪುರ, ನ.02 (DaijiworldNews/HR): ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ಅವರು ಅತ್ಯಾಚಾರ ಸಂತ್ರಸ್ತೆಯ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಇದೀಗ ಈ ಕುರಿತು ಕ್ಷಮೆಯಾಚಿಸಿದ್ದಾರೆ.
ಸೋಲಾರ್ ಹಗರಣದ ಆರೋಪಿ ಸರಿತಾ ನಾಯರ್ ಅವರು ಪೊಲೀಸರಿಗೆ ದೂರು ನೀಡಿದ್ದು , ತನ್ನ ಮೇಲೆ ಕಾಂಗ್ರೆಸ್ನ ಮಾಜಿ ಸಚಿವ ಎ.ಪಿ. ಅನಿಲ್ ಕುಮಾರ್ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿಸಿದ್ದರು.
ಇನ್ನು ಈ ದೂರಿಗೆ ಸಂಬಂಧಿಸಿದಂತೆ ಮಾತನಾಡಿದ್ದ ರಾಮಚಂದ್ರನ್, "ಅತ್ಯಾಚಾರಕ್ಕೊಳಗಾದ ಮಹಿಳೆಗೆ ಸ್ವಾಭಿಮಾನ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ ಅಥವಾ ಮತ್ತೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗದಿರಲು ಪ್ರಯತ್ನಿಸುತ್ತಾಳೆ" ಎಂದು ಹೇಳಿದ್ದು, ಅವರ ಈ ಹೇಳಿಕೆ ಭಾರಿ ಟೀಕೆಗೆ ಗುರಿಯಾಗಿತ್ತು.