ಹೈದರಾಬಾದ್,ನ.02 (DaijiworldNews/HR): ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯಲ್ಲಿ ಟಾಟಾ ಸುಮೋ ವಾಹನವೊಂದು ಟಿಪ್ಪರ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ನಾಲ್ವರು ಸಜೀವ ದಹವವಾಗಿ, ಮೂವರು ಗಾಯಗೊಂಡ ಘಟನೆ ನಡೆದಿದೆ.
ಟಿಪ್ಪರ್ ಟಾಟಾ ಸುಮೋ ಢಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಲಾರಿಯ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದ್ದು, ಟಾಟಾ ಸುಮೋದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಮೃತಪಟ್ಟವರು ತಮಿಳು ನಾಡು ಮೂಲದವರು ಎಂದು ತಿಳಿದು ಬಂದಿದೆ.
ಇನ್ನು ಬೆಂಕಿಯ ಕೆನ್ನಾಲಗೆಗೆ ಮೂರು ವಾಹನಗಳು ಸುಟ್ಟು ಕರಕಲಾಗಿವೆ ಎಂದು ವರದಿಯಾಗಿದೆ.
ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಕಡಪ ರಿಮ್ಸ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕಡಪ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.