ನವದೆಹಲಿ, ನ.02 (DaijiworldNews/PY): ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನತೆಗೆ ಇದೀಗ ಮತ್ತೆ ಎಲ್ಪಿಜಿ ದರ ಏರಿಕೆಯ ಬಿಸಿ ತಟ್ಟಿದ್ದು, ನುಂಗಲಾರದ ತುತ್ತಾಗಿದೆ.
ಸಾಂದರ್ಭಿಕ ಚಿತ್ರ
ಕಳೆದ ತಿಂಗಳು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಿಸಲಾಗಿದ್ದು, ಇದೀಗ 19 ಕೆಜಿ ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 75 ರೂ. ಹೆಚ್ಚಿಸಲಾಗಿದೆ. ಈ ಮೂಲಕ ನಹದೆಹಲಿಯಲ್ಲಿ 19 ಕೆಜಿ ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ಗಳ ಬೆಲೆ 1,241 ರೂ.ಆಗಿದೆ. ಕಳೆದ ತಿಂಗಳು ಇದರ ಬೆಲೆ 1,166 ಆಗಿತ್ತು.
ಈ ಬೆಲೆ ಏರಿಕೆಯು ಕೇವಲ ಕಮರ್ಷಿಯಲ್ ಸಿಲಿಂಡರ್ಗಳಿಗೆ ಮಾತ್ರವೇ ಅನ್ವಯವಾಗಲಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯಾದ ಬದಲಾವಣೆ ಇರುವುದಿಲ್ಲ.