ಬಾಗಲಕೋಟೆ,ನ.02 (DaijiworldNews/HR): ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮನೆಯಿಂದ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕಳ್ಳರು ಉಮಾಶ್ರೀ ಅವರ ಮನೆಯ ಬಾಗಿಲನ್ನು ಮುರಿದು ಒಳನುಗ್ಗಿದ್ದು, ಅಪಾರ ಪ್ರಮಾಣದ ವಸ್ತು ಮತ್ತು ಹಣ ದೊಚಿಕೊಂಡು ಹೋಗಿರುವುದಾಗಿ ವರದಿಯಾಗಿದೆ.
ಇನ್ನು ಘಟನಾ ಸ್ಥಳಕ್ಕೆ ದೌಡಾಯಿಸಿದ ಸಿಪಿಐ ಕರುಣೇಸಿಗೌಡ ಮತ್ತು ಪಿಎಸ್ಐ ವಿಜಯಕುಮಾರ ಕಾಂಬಳೆ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
ಈ ಘಟನೆ ಬಗ್ಗೆ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.