ಬೆಂಗಳೂರು, ನ. 02 (DaijiworldNews/MB) : ಸಂಸದ ಅಶೋಕ್ ಗಸ್ತಿ ಅವರ ನಿಧನದಿಂದಾಗಿ ತೆರವಾದ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಚುನಾವಣಾ ಆಯೋಗ ಉಪಚುನಾವಣೆಯ ದಿನಾಂಕವನ್ನು ಪ್ರಕಟ ಮಾಡಿದ್ದು ಡಿಸೆಂಬರ್ 1ರಂದು ಮತದಾನ ನಡೆದು ಅಂದೇ ಮತ ಎಣಿಕೆ ನಡೆಯಲಿದೆ.
ಜುಲೈನಲ್ಲಿ ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದ ಬಿಜೆಪಿ ಮುಖಂಡರಾದ ಗಸ್ತಿಯವರು ಕೊರೊನಾ ಸೋಂಕು ದೃಢಪಟ್ಟ ಬಳಿಕ ಸೆಪ್ಟೆಂಬರ್ 17ರಂದು ಕೊನೆಯುಸಿರೆಳೆದಿದ್ದಾರೆ.
ಇನ್ನು ಚುನಾವಣೆ ಸಂದರ್ಭದಲ್ಲಿ ಎಲ್ಲರೂ ಕೂಡಾ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಚುನಾವಣಾ ಆಯೋಗವು ತಿಳಿಸಿದೆ.
ಹಾಗೆಯೇ ಡಿಸೆಂಬರ್ 1ರಂದೇ ಉತ್ತರ ಪ್ರದೇಶ ವಿಧಾನ ಪರಿಷತ್ತಿನ 11 ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಹಾಗೂ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಐದು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗವು ಪ್ರಕಟನೆಯಲ್ಲಿ ತಿಳಿಸಿದೆ.