ಗುವಾಹಟಿ,ನ. 02 (DaijiworldNews/HR): ಕೊರೊನಾ ಸೋಂಕು ತಗುಲಿ ವಾರದ ಹಿಂದೆಯಷ್ಟೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್(86 ವರ್ಷ) ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ರಾತ್ರಿ ಗೊಗೊಯ್ ಅವರ ಆರೋಗ್ಯಸ್ಥಿತಿ ಹದಗೆಟ್ಟಿದ್ದರಿಂದ ಗುವಾಹಟಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಆರೋಗ್ಯ ಅಧೀಕ್ಷಕ ಅಭಿಜಿತ್ ಶರ್ಮ ತಿಳಿಸಿದ್ದಾರೆ.
ಇನ್ನು ವಿಶೇಷ ವೈದ್ಯರ ಗುಂಪೊಂದು ಅವರ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದು, ಅವರ ಅಮೋನಿಯಾ ಪ್ರಮಾಣ ಹೆಚ್ಚಿದೆ. ಆಮ್ಲಜನಕ ಪ್ರಮಾಣ ಸಹಜ ಸ್ಥಿತಿಯಲ್ಲಿದೆ ಜೊತೆಗೆ ಮಾನಸಿಕವಾಗಿಯೂ ಸದೃಢರಾಗಿದ್ದಾರೆ ಎಂದು ತಿಳಿಸಿದ್ದಾರೆ.