ಬೆಂಗಳೂರು, ನ.02 (DaijiworldNews/PY): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಏಕಲವ್ಯ, ಜೀವಮಾನ ಸಾಧನೆ , ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಹಾಗೂ ಎನ್.ಎಸ್.ಎಸ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
2017, 2018 ಹಾಗೂ 2019ನೇ ಸಾಲಿನ ಏಕಲವ್ಯ ಜೀವವವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಹಾಗೂ ಎನ್.ಎಸ್.ಎಸ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಕನ್ನಡ ಹಾಗೂ ಸಂಸ್ಕ್ರತಿ ಇಲಾಖೆ, ಪ್ರವಾಸೋದ್ಯಮ, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಚಿವ ಸಿ.ಟಿ.ರವಿ ಅವರು ಭಾನುವಾರ ಪ್ರಕಟಿಸಿದ್ದರು.
ಕಂದಾಯ ಸಚಿವ ಆರ್.ಅಶೋಕ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಸಿ.ಟಿ. ರವಿ, ಶಾಸಕ ರಿಜ್ವಾನ್ ಅಶ್ರದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಕಲ್ಪನಾ ಮೊದಲಾದವರು ಉಪಸ್ಥಿತರಿದ್ದರು.
ಈ ವೇಳೆ, ಏಕಲವ್ಯ ಪ್ರಶಸ್ತಿ ಸೇರಿದಂತೆ ಎಲ್ಲಾ ಪ್ರಶಸ್ತಿ ಪುರಸ್ಕೃತ ಕ್ರೀಡಾ ಸಾಧಕರಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿದರು.
ಏಕಲವ್ಯ ಪ್ರಶಸ್ತಿಯು 2 ಲಕ್ಷ ರೂ. ನಗದು, ಕಂಚಿನ ಪ್ರತಿಮೆ, ಜೀವಮಾನ ಸಾಧನೆ ಪ್ರಶಸ್ತಿಯು 1.5 ಲಕ್ಷ ರೂ. ನಗದು, ಕ್ರೀಡಾ ರತ್ನ ಪ್ರಶಸ್ತಿಯು 1 ಲಕ್ಷ ರೂ. ನಗದು ಹಾಗೂ ಕ್ರೀಡಾ ಪೋಷಕ ಪ್ರಶಸ್ತಿಯು 5 ಲಕ್ಷ ರೂ. ನಗದನ್ನು ಒಳಗೊಂಡಿದೆ.