ಮಂಗಳೂರು, ನ. 02 (DaijiworldNews/SM): ನಗರದಲ್ಲಿ ನಡೆಯಲಿರುವ ಬಿಜೆಪಿ ವಿಶೇಷ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 4ರಂದು ಸಿಎಂ ಬಿಎಸ್ ಯಡಿಯೂರಪ್ಪನವರು ಮಂಗಳೂರಿಗೆ ಆಗಮಿಸಲಿದ್ದಾರೆ. ಹಾಗೂ ನ.5ರಂದು ನಗರದಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಭಾಗಿಗಳಾಗಲಿದ್ದಾರೆ.
ಎರಡು ದಶಕಗಳ ಬಳಿಕ ಮೊದಲ ಬಾರಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಕಡಲನಗರಿಯಲ್ಲಿ ನಡೆಯುತ್ತಿದೆ. ನವೆಂಬರ್ 4ರಂದು ಮುಖ್ಯಮಂತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ರಾತ್ರಿ 7 ಗಂಟೆಗೆ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮುಖ್ಯಮಂತ್ರಿಯವರು ರಾತ್ರಿ ಮಂಗಳೂರಿನಲ್ಲೇ ತಂಗಲಿದ್ದಾರೆ.
ನ. 5ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯುವ ರಾಜ್ಯ ಬಿಜೆಪಿ ವಿಶೇಷ ಸಭೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರ ತನಕ ನಡೆಯುವ ಬಿಜೆಪಿ ಪ್ರಮುಖರ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ರಿಂದ ಸಂಜೆ 5ರ ತನಕ ಟಿವಿ ರಮಣ್ ಪೈ ಹಾಲ್ ನಲ್ಲಿ ನಡೆಯುವ ಬಿಜೆಪಿ ವಿಶೇಷ ಸಭೆಯಲ್ಲಿ ಭಾಗವಹಿಸುವರು.
ಬಳಿಕ ರಾತ್ರಿ 7.35ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.