ಕಲಬುರಗಿ, ನ.03 (DaijiworldNews/PY): ಆಳಂದ ತಾಲೂಕಿನ ಕಡಗಂಚಿ ಗ್ರಾಮ ಪಂಚಾಯತ್ ಸದಸ್ಯರೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಆಳಂದ ತಾಲೂಕಿನ ಕಡಂಚಿ ಗ್ರಾಮ ಪಂಚಾಯತ್ನ ಸದಸ್ಯ ಶಿವಲಿಂಗಪ್ಪ ಭೂಶೆಟ್ಟಿ (53) ಹತ್ಯೆಯಾದ ವ್ಯಕ್ತಿ
ಇವರು ನಗರದ ಕೈಲಾಶ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ರಾತ್ರಿ ಉವರು ಮನೆಯ ಬಳಿ ನಿಂತಾಗ ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಪರಾರಿಯಾಗಿದ್ದಾರೆ.
ಹತ್ಯೆಗೆ ಖಚಿತ ಮಾಹಿತಿ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.