ಬೆಂಗಳೂರು, ನ. 03 (DaijiworldNews/MB) : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಪ್ರಸ್ತುತ ಜೈಲಿನಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನು ಮಂಗಳವಾರ ಹೈಕೋರ್ಟ್ ತಿರಸ್ಕಾರ ಮಾಡಿದ್ದು ಇಬ್ಬರಿಗೂ ಈಗ ಜೈಲೇ ಗತಿಯಾಗಿದೆ.
ತಮಗೆ ಜಾಮೀನು ನೀಡುವಂತೆ ರಾಗಿಣಿ, ಸಂಜನಾ ಹಾಗೂ ಇತರೆ ನಾಲ್ವರು ಆರೋಪಿಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠ, ಅರ್ಜಿ ವಿಚಾರಣೆ ತೀರ್ಪು ಕಾಯ್ದಿರಿಸಿದ್ದರು. ಮಂಗಳವಾರ ಎಲ್ಲಾ ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದ್ದಾರೆ. ಈ ನಟಿಯರು ಕಳೆದ ಎರಡು ತಿಂಗಳಿನಿಂದ ಜೈಲಿನಲ್ಲಿದ್ದು ಈಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟುವ ಸಾಧ್ಯತೆಯಿದೆ.